ಕ್ರೈಂ ಸ್ಟೋರಿ
ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ!
Supreme Court orders re-investigation of the Sowjanya case!

ನವದೆಹಲಿ : ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮಾವತಿ ಗೌಡ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಇದೀಗ ಮರು ತನಿಖೆಗೆ ಆದೇಶಿಸಿದ್ದು, ಹೊಸ ಎಸ್‌ಐಟಿ ರಚಿಸಿ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಇನ್ನು ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ಸುಪ್ರೀಂ ಕೋರ್ಟ್ ಹೇಳಿದೆ.




