Freedom TV
ನಂದಿನಿ ಹಾಲು ಗ್ರಾಹಕರಿಗೆ ಕಾದಿದ್ಯಾ ಬಿಗ್ ಶಾಕ್?
Is a big shock in store for Nandini milk consumers?

ಬೆಂಗಳೂರು : ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹4 ರಿಂದ ₹5 ರಷ್ಟು ಹೆಚ್ಚಿಸುವುದು ಸದ್ಯದಲ್ಲೇ ಅಧಿಕೃತಗೊಳ್ಳುವ ಸಾಧ್ಯತೆಯಿದೆ.
ಹಾಲಿನ ದರ ಏರಿಕೆ ಸಂಬಂಧ ಹಾಲು ಒಕ್ಕೂಟಗಳು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದು, ಇಂದು ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆಯಿದೆ. ಈ ವೇಳೆ ಪ್ರತಿ ಲೀಟರ್ ಹಾಲಿನ ಮೇಲೆ 10 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಕೆ ಮಾಡಲಿದ್ದಾರೆ. ಜೊತೆಗೆ ಹಾಲಿನ ಜೊತೆಗೆ ಮೊಸರು, ಬೆಣ್ಣೆ, ತುಪ್ಪದ ಬೆಲೆ ಏರಿಕೆಗೂ ಮನವಿ ಮಾಡಲಿದ್ದಾರೆ.
ಈಗಾಗಲೇ ಹಾಲು ಒಕ್ಕೂಟಗಳೊಂದಿಗೆ ಸಭೆ ನಡೆದಿದ್ದು, ಸಿಎಂ ಮಟ್ಟದಲ್ಲಿ ನಡೆಯಲಿರುವ ಸಭೆಯ ಬಳಿಕ ಹಾಲಿನ ದರ ಏರಿಕೆಯ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.




