bengaluru

ಬೆಂಗಳೂರಲ್ಲಿ ಆನೆ ದಾಳಿಗೆ ವೃದ್ಧ ಬಲಿ!

Elderly man killed in elephant attack in Bengaluru!

ಬೆಂಗಳೂರು : ವಾಕಿಂಗ್​​ಗೆ ಹೋಗಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಗರದ ರಾಜರಾಜೇಶ್ವರಿ ಆಸ್ಪತ್ರೆ ಹಿಂಭಾಗ ಅಂಚೆಪಾಳ್ಯದಲ್ಲಿ ಘಟನೆ ನಡೆದಿದೆ. ನಾಗರಾಜ್ (60) ಆನೆ ಅಟ್ಟಹಾಸಕ್ಕೆ ಬಲಿಯಾದ ವ್ಯಕ್ತಿ.

ಎಂದಿನಂತೆ ಇಂದು ಮುಂಜಾನೆ 5.30ರ ಸುಮಾರಿಗೆ ನಾಗರಾಜ್ ಅವರು ವಾಕಿಂಗ್‌ಗೆ ತೆರಳಿದ್ದರು. ಈ ವೇಳೆ ಏಕಾಏಕಿ ಪ್ರತ್ಯಕ್ಷವಾದ ಆನೆಯೊಂದು ಅವರ ಮೇಲೆ ಭೀಕರ ದಾಳಿ ನಡೆಸಿದೆ. ಸೊಂಡಿಲಿನಿಂದ ಎತ್ತಿ ಎಸೆದ ಪರಿಣಾಮ ಅವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜಧಾನಿಯಲ್ಲೇ ಆನೆ ದಾಳಿ ನಡೆಸಿರುವುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.

Comments (0)

Your email address will not be published. Required fields are marked *

Back to top button
Verified by MonsterInsights