ರಾಜಕೀಯ

ವಿಧಾನಸೌಧದ ಮೆಟ್ಟಿಲ ಮೇಲೆ ಉರ್ದು ಹಬ್ಬ ಇಲ್ಲ – ಸಿಎಂ ಕಚೇರಿಯಿಂದ ಸ್ಪಷ್ಟನೆ!

No Urdu festival on the steps of the Vidhana Soudha – clarification from the CM's office!

ಬೆಂಗಳೂರು : ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಭಾಷಾ ಹಬ್ಬ’ ವಿಚಾರವಾಗಿ ಕನ್ನಡಪರ ಸಂಘಟನೆಗಳು ಮತ್ತು ವಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಿಎಂ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. 

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಕಾರ್ಯಕ್ರಮಗಳಿಗೆ ಆಸ್ಪದ ಇರುವುದಿಲ್ಲ. ಈ ಕುರಿತ ಸುದ್ದಿ ಸುಳ್ಳು, ರಾಜ್ಯ ಸರ್ಕಾರವು ಇಂತಹ ಯಾವುದೇ ಅನುಮತಿ ನೀಡಿಲ್ಲ ಎಂದು ತಿಳಿಸಲಾಗಿದೆ.

ಈ ಹಿಂದೆ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ವಿಚಾರವಾಗಿ ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ವಿಧಾನಸೌಧದ ಮುಂಭಾಗದಲ್ಲೇ ಉರ್ದು ಹಬ್ಬ ಆಚರಿಸಲು ಮುಂದಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ನವೆಂಬರ್ 9ರ ‘ಉರ್ದು ದಿನಾಚರಣೆ’ಯ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಿದ್ಧತೆಗಳು ನಡೆದಿವೆ ಎನ್ನಲಾಗಿತ್ತು. ಈ ವರದಿಗಳು ಹೊರಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಪರ-ವಿರೋಧದ ತೀವ್ರ ಚರ್ಚೆ ಆರಂಭವಾಗಿತ್ತು.

ಈ ಕುರಿತು ಈ ಹಿಂದೆ ಮಾತನಾಡಿದ್ದ ಸಚಿವ ಯು.ಟಿ. ಖಾದರ್, “ಉರ್ದು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳನ್ನು ರಾಜ್ಯದ ಎಲ್ಲಾ ಸಮುದಾಯಗಳಿಗೆ ಪರಿಚಯಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ” ಎಂದು ತಿಳಿಸಿದ್ದರು.

ಆದರೆ, ಈ ಕಾರ್ಯಕ್ರಮ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯಲಿದೆ ಎಂಬ ಊಹಾಪೋಹಗಳು ಮತ್ತು ವ್ಯಾಪಕ ಚರ್ಚೆಗಳಿಗೆ ಇದೀಗ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆಯ ಮೂಲಕ ಅಧಿಕೃತವಾಗಿ ತೆರೆ ಎಳೆದಿದೆ.

Comments (0)

Your email address will not be published. Required fields are marked *

Back to top button
Verified by MonsterInsights