ಸಿನಿಮಾ

ನಟ ನಾನಾ ಪಾಟೇಕರ್‌ ನಿಧನ – ಪಿಎಂ, ಸಿಎಂ ಸೇರಿ ಹಲವರು ಸಂತಾಪ!

Actor Nana Patekar passes away – PM, CM, and many others express condolences!

ಭಾರತೀಯ ಚಿತ್ರರಂಗದ ಮೇರುನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಹಿರಿಯ ನಟ ನಾನಾ ಪಾಟೇಕರ್ ಅವರು ಇಂದು ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದಾಗಿ ಕೊನೆಯುಸಿರೆಳೆದರು.

ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ನಾನಾ ಪಾಟೇಕರ್, ತಮ್ಮ ಖಡಕ್ ಧ್ವನಿ ಮತ್ತು ಗಂಭೀರ ನಟನೆಯಿಂದಲೇ ಗುರುತಿಸಿಕೊಂಡಿದ್ದರು. ‘ಪರಿಂದಾ’, ‘ಕ್ರಾಂತಿವೀರ್’, ‘ಅಗ್ನಿಸಾಕ್ಷಿ’, ‘ವೆಲ್ ಕಮ್’, ‘ತಿರಂಗಾ’, ‘ನಟಸಾಮ್ರಾಟ್’ ಸೇರಿದಂತೆ ಹಲವು ವಿಭಿನ್ನ ಪಾತ್ರಗಳ ಮೂಲಕ ಅವರು ಸಿನಿರಸಿಕರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.

ವಿಶೇಷವಾಗಿ ಕನ್ನಡದ ‘ಯಕ್ಷ’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡಿಗರಿಗೂ ಹತ್ತಿರವಾಗಿದ್ದರು. ಈ ಚಿತ್ರದಲ್ಲಿ ಅವರು ನಟ ಲೂಸ್ ಮಾದ ಯೋಗಿ ಅವರ ತಂದೆಯ ಪಾತ್ರದಲ್ಲಿ ಅಭಿನಯಿಸಿ ಗಮನ ಸೆಳೆದಿದ್ದರು.

ಪಾಟೇಕರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಕಂಬನಿ ಮಿಡಿದಿದ್ದಾರೆ. “ನಾನಾ ಪಾಟೇಕರ್ ಅವರು ಪ್ರತಿ ಪಾತ್ರಕ್ಕೂ ವೈವಿಧ್ಯತೆ ಮತ್ತು ಸೃಜನಶೀಲತೆ ತುಂಬುತ್ತಿದ್ದರು. ಹಿಂದಿ ಮತ್ತು ಮರಾಠಿ ಚಲನಚಿತ್ರ ರಂಗಕ್ಕೆ ಅವರ ಕೊಡುಗೆ ಅಪಾರ. ಅವರ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

“ಚಿತ್ರರಂಗದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ ಹಿರಿಯ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights