ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ – ಅಭಿಜಿತ್ ದೀಪ್ಕೆ ವಿಮಾನದಲ್ಲೇ ಪೊಲೀಸ್ ವಶಕ್ಕೆ!
CJP protest in Delhi – Abhijit Deepke taken into police custody right on the flight!

ನವದೆಹಲಿ : ಎಸ್ಐಆರ್ ವಿರುದ್ಧ ದೆಹಲಿಯಲ್ಲಿ ಹಮ್ಮಿಕೊಂಡಿರುವ ಸಿಜೆಪಿ ಪ್ರತಿಭಟನೆಗೂ ಮುನ್ನ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಸೇರಿದಂತೆ ಮೂವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂಬೈನಿಂದ ದೆಹಲಿಗೆ ಆಗಮಿಸಿದ್ದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಿಮಾನದೊಳಗೆಯೇ ಪ್ರವೇಶಿಸಿ ವಶಕ್ಕೆ ಪಡೆದಿದ್ದಾರೆ.
ಮುಂಬೈನಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಪ್ರಮುಖ ನಾಯಕರಾದ ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಪೊಲೀಸರ ಕ್ರಮವನ್ನು ಖಂಡಿಸಿ ನಾಯಕರು ಸ್ಥಳದಲ್ಲೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗಿಯಾಗಿದ್ದಾರೆ. ಸಿಜೆಪಿ ಹಮ್ಮಿಕೊಂಡಿರುವ ಈ ಪ್ರತಿಭಟನೆ ದೆಹಲಿಯಲ್ಲಿ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ.




