ರಾಜಕೀಯ
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ!

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ವರ್ಷಗಳಿಂದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಸೌಮ್ಯಾ ರೆಡ್ಡಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ (AICC) ಅಧ್ಯಕ್ಷರಿಗೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ ಸೌಮ್ಯಾ ರೆಡ್ಡಿ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ನ ಕಾರ್ಯಕರ್ತೆಯಾಗಿ ಕೆಲಸ ಮಾಡ್ತೀನಿ ಎಂದು ಉಲ್ಲೇಖಿಸಿದ್ದಾರೆ.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆಯಿಂದ ಪಕ್ಷದ ವಲಯದಲ್ಲಿ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.




