ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಗುಂಡಿಟ್ಟು ವಕೀಲನ ಬರ್ಬರ ಹತ್ಯೆ

Lawyer brutally murdered after intruders break into his home and shoot him!

ಬೆಂಗಳೂರು : ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವಕೀಲರೊಬ್ಬರ ಹಣೆಗೆ ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಟ್ಟಂದೂರು ಅಗ್ರಹಾರದಲ್ಲಿ ನಿನ್ನೆ (ಭಾನುವಾರ) ರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕೊಲೆಯಾದ ವಕೀಲರನ್ನು ಮಂಜುನಾಥ್ (42) ಎಂದು ಗುರುತಿಸಲಾಗಿದೆ. ಮಂಜುನಾಥ್ ಅವರ ಮನೆಯಲ್ಲಿ ಬಾಡಿಗೆಗೆ ಇದ್ದ ವ್ಯಕ್ತಿಗಳೇ ಈ ಕೃತ್ಯದ ಹಿಂದೆ ಇದ್ದಾರೆ ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಸುಮಾರು 11:30ರ ಸಮಯದಲ್ಲಿ ವಕೀಲ ಮಂಜುನಾಥ್ ಅವರ ಮನೆಯ ಬಾಗಿಲು ತಟ್ಟಲಾಗಿದೆ. ಮಂಜುನಾಥ್ ಅವರು ಬಾಗಿಲು ತೆಗೆದ ತಕ್ಷಣವೇ, ಒಳನುಗ್ಗಿದ ಇಬ್ಬರು ವ್ಯಕ್ತಿಗಳು ಅವರ ಮೇಲೆ ಏಕಾಏಕಿ ದಾಳಿ ನಡೆಸಿ, ಹಣೆಗೆ ನೇರವಾಗಿ ಗುಂಡು ಹಾರಿಸಿದ್ದಾರೆ. ಪರಿಣಾಮ ಸ್ಥಳದಲ್ಲೇ ಅವರು ಪ್ರಾಣಬಿಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Comments (0)

Your email address will not be published. Required fields are marked *

Back to top button
Verified by MonsterInsights