ರಾಜಕೀಯ

ರಾಹುಲ್ ಗಾಂಧಿ ಬೆಂಗಾವಲು ವಾಹನ ಸರಣಿ ಅಪಘಾತ!

Rahul Gandhi's convoy involved in a multi-vehicle accident!

ಉತ್ತರ ಪ್ರದೇಶ : ರಾಹುಲ್ ಗಾಂಧಿ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾಗಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಾಹುಲ್ ಗಾಂಧಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಸಂಪೂರ್ಣ ಸುರಕ್ಷಿತವಾಗಿದ್ದಾರೆ.

ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದೆ. ಸುಲ್ತಾನ್‌ಪುರ ನ್ಯಾಯಾಲಯಕ್ಕೆ ವಿಚಾರಣೆಗಾಗಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಬೆಂಗಾವಲು ವಾಹನಗಳು ಒಂದಕ್ಕೊಂದು ಡಿಕ್ಕಿಹೊಡೆದಿವೆ.

ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮುಂಭಾಗದಲ್ಲಿದ್ದ ವಾಹನವು ಇದ್ದಕ್ಕಿದ್ದಂತೆ ಹಠಾತ್ ಬ್ರೇಕ್ ಹಾಕಿದ್ದರಿಂದ ಈ ಸರಣಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಹಿಂದಿನ ವಾಹನಗಳು ನಿಯಂತ್ರಣ ಕಳೆದುಕೊಂಡು ಪರಸ್ಪರ ಗುದ್ದಿಕೊಂಡಿವೆ. ಒಟ್ಟು 5 ವಾಹನಗಳು ಹಾಗೂ ಒಂದು ಆ್ಯಂಬುಲೆನ್ಸ್ ಈ ಸರಣಿ ಅಪಘಾತದಲ್ಲಿ ಜಖಂಗೊಂಡಿವೆ.

ಅಪಘಾತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights