hasanಜಿಲ್ಲೆ

ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್!

The doors to the sanctum sanctorum of the Hasanamba Temple have been opened!

ಹಾಸನ : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ದೊರೆಯಿತು. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12:28ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಅವರು ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದು, ಗಣ್ಯರ ಸಮ್ಮುಖದಲ್ಲಿ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಯಿತು.

ಗರ್ಭಗುಡಿಯ ಬಾಗಿಲು ತೆರೆಯುವ ಶುಭ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರಿನ ಸಿದ್ದಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಮುಜರಾಯಿ ಖಾತೆ ಸಚಿವ ಬಸಂತಪ್ಪ, ಜಿಲ್ಲಾಧಿಕಾರಿ ಲತಾಕುಮಾರಿ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ದೇವಾಲಯದ ಒಳಗೆ 20 ಜನ ಅರ್ಚಕರ ವಿಶೇಷ ತಂಡದಿಂದ ದೇವಿಗೆ ಶಾಸ್ತ್ರೋಕ್ತ ವಿಶೇಷ ಪೂಜೆಗಳು ನೆರವೇರುತ್ತಿವೆ. ಜಿಲ್ಲೆಯಿಂದ ಮಾತ್ರವಲ್ಲದೆ ಕರ್ನಾಟಕದ ಮೂಲೆ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ತಾಯಿಯ ದರ್ಶನಕ್ಕಾಗಿ ಹಾಸನಕ್ಕೆ ಆಗಮಿಸುತ್ತಾರೆ.

Comments (0)

Your email address will not be published. Required fields are marked *

Back to top button
Verified by MonsterInsights