ರಾಜ್ಯ
ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ – ತಮಿಳುನಾಡಿಗೆ ನೀರು ಹರಿಸಲು CWRC ಶಿಫಾರಸು!
Another Cauvery shock for Karnataka – CWRC recommends releasing water to Tamil Nadu!

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ದೆಹಲಿಯಲ್ಲಿ ನಡೆದ CWRC ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಈಗಾಗಲೇ ಕುಡಿಯುವ ನೀರಿಗೆ ಅಭಾವ ಎದುರಾಗಿರುವಾಗ ಈ ಶಿಫಾರಸು ತೀವ್ರ ಕಳವಳಕ್ಕೆ ಕಾರಣವಾಗಿದೆ.
ಕಳೆದ ಅಕ್ಟೋಬರ್ 23ರಿಂದ ಕರ್ನಾಟಕವು ಕಾವೇರಿ ನದಿ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದ್ದರೂ, ಕರ್ನಾಟಕ ನೀರು ಹರಿಸಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಸುಪ್ರೀಂ ಕೋರ್ಟ್‌ಗೆ ತುರ್ತು ಮನವಿ ಮಾಡಿ ಮಾಡಿತ್ತು.




