
ಕೊಪ್ಪಳ : ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಕೊಪ್ಪಳದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದರು. ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಹನುಮ ವಿರೋಧ, ರಾಮನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರೊಟೆಸ್ಟ್ ನಡೆಸಿದರು.

ಸಂಸದ ಕರಡಿ ಸಂಗಣ್ಣ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಸಹ ಘೋಷಣೆ ಕೂಗಿದ್ದು, ಮರಳಿ ಹನುಮ ಧ್ವಜ ಏರಿಸಲು ಪ್ರತಿಭಟನಾಕಾರರು ಒತ್ತಾಯಿಸಿದರು.




