ರಾಜಕೀಯರಾಜ್ಯಸುದ್ದಿ

ಯತ್ನಾಳ್​ ಅಧ್ಯಕ್ಷತೆಯ ಸಕ್ಕರೆ ಕಾರ್ಖಾನೆ ಮುಚ್ಚಲು ನೀಡಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್​ ತಡೆ

ವಿಜಯಪುರ : ಪರಿಸರ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್​ ಜಾರಿ ಮಾಡಿತ್ತು. ಆದ್ರೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ.

ಈ ಬಗ್ಗೆ ಟ್ವೀಟರ್​​ನಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮಾಹಿತಿ ಹಂಚಿಕೊಂಡಿದ್ದಾರೆ.

ಸಿದ್ದಸಿರಿ ಸಕ್ಕರೆ ಹಾಗೂ ಎಥನಾಲ್​ ಕಾರ್ಖಾನೆ ಮುಚ್ಚಲು ಸರ್ಕಾರ ನೋಟಿಸ್​​ ನೀಡಿತ್ತು. “ಸತ್ಯದ ಗೆಲುವು” victory of truth ಎಂದು ಯತ್ನಾಳ್ ಟ್ವಿಟ್ ಮಾಡಿದ್ದಾರೆ. ಕಾರ್ಖಾನೆ ಮುಚ್ಚುವ ಷಡ್ಯಂತ್ರಕ್ಕೆ ಕೋರ್ಟ್​ ತಡೆ ನೀಡಿದೆ ಎಂದು ಬರೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button