ಬೀದರ್ : ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 24 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಜಪ್ತಿ ಮಾಡಿದ್ದಾರೆ.
17 ಪ್ರಕರಣಗಳಿಂದ 18 ಜನ ಆರೋಪಿಗಳನ್ನ ಬಂಧಿಸಿ 24 ಲಕ್ಷ 26 ಸಾವಿರ ಮೌಲ್ಯದ ವಸ್ತುಗಳು ಜಪ್ತಿ ಮಾಡಲಾಗಿದೆ. ಜಿಲ್ಲೆಯ ಹುಮನಬಾದ್, ಬೀದರ್, ಭಾಲ್ಕಿ ತಾಲೂಕಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ, ಸೇರಿದಂತೆ ಅಕ್ರಮ ಚಟುವಟಿಕೆಗಳ ಕುರಿತಾಗಿ ಪ್ರಕರಣಗಳು ದಾಖಲಾಗಿದ್ದವು.
55 ಗ್ರಾಂ ಬಂಗಾರ ಆಭರಣ, 20 ಮೊಬೈಲ್, 10 ಬೈಕ್, ಗೂಡ್ಸ್ ವಾಹನ, ಟ್ರಾಕ್ಟರ್ ಜಪ್ತಿ ಮಾಡಲಾಗಿದೆ. ಡಿಸೆಂಬರ್ ತಿಂಗಳಿಂದ ಇಲ್ಲಿಯವರೆಗೆ ನಡೆದಿದ್ದ ದರೋಡೆ ಪ್ರಕರಣಗಳನ್ನು ಬೇಧಿಸಿದ ಪೊಲೀಸರ ಕಾರ್ಯಕ್ಕೆ ಎಸ್ಪಿ ಪ್ರಶಂಸಿಸಿದ್ದಾರೆ. ಈ ಬಗ್ಗೆ ಎಸ್ಪಿ ಚನ್ನವಸವಣ್ಣ ಲಂಗೋಟಿ ಮಾಹಿತಿ ನೀಡಿದ್ರು.