ಚಾಮರಾಜನಗರ : ಬೆಳ್ಳಂಬೆಳಗ್ಗೆ ಗಡಿಜಿಲ್ಲೆ ಚಾಮರಾಜನಗರದಲ್ಲೂ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ್ದಾರೆ.
ಗ್ರಾಮೀಣಾಭಿವೃದ್ದಿ ಇಲಾಖೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಇಂಜಿನಿಯರ್ ಪಿ.ರವಿಕುಮಾರ್ ಗೆ ಶಾಕ್ ನೀಡಿದ್ದಾರೆ.
ಪಿ.ರವಿಕುಮಾರ್ ಗೆ ಸೇರಿದ ಕೊಳ್ಳೆಗಾಲ ತಾಲೂಕಿನ ಆಲಹಳ್ಳಿ ಗ್ರಾಮದ ಮನೆ ಹಾಗು ಮೈಸೂರಿನ ಮನೆಗೆ ಲೋಕಾಯುಕ್ತ ದಾಳಿ ನಡೆಸಿ ದಾಖಲಾತಿಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ದಿನಗಳ ಹಿಂದಷ್ಟೆ ಹುಣಸೂರಿನಿಂದ ಚಾಮರಾಜನಗರಕ್ಕೆ ವರ್ಗಾವಣೆಗೊಂಡಿದ್ದ ಪಿ. ರವಿಕುಮಾರ್ ಆದಾಯಕ್ಕಿಂತ ಮೀರಿ ಆಸ್ತಿ ಸಂಪಾದನೆ, ಲಂಚ ಸೇರಿದಂತೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ.