ಜಿಲ್ಲೆ

ಶಾಲೆಗಳಿಗೆ ಬಾಂಬ್ ಬೆದರಿಕೆ : ಪೋಷಕರು ಆತಂಕ ಪಡುವ ಅಗತ್ಯವಿಲ್ಲ ; ಡಾ. ಜಿ ಪರಮೇಶ್ವರ್​​

ತುಮಕೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಕೊರಟಗೆರೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಶಾಲೆಗಳಿಗೆ ಬಾಂಬ್​ ಇಟ್ಟಿದ್ದೀವಿ. ನಿಮ್ಮ ಮಕ್ಕಳನ್ನು ಕೊಲ್ತಿವಿ ಅನ್ನೋ ಮೆಸೇಜ್​ ಬಂದಿದೆ. ಮತಾಂತರ ಆಗ್ಬೇಕು, ಇಲ್ಲಾಂದ್ರೆ ನಿಮ್ಮನ್ನ ನಾವು ಬಿಡಲ್ಲ ಅನ್ನೋ ಸಂದೇಶ ಕಳುಹಿಸಿದ್ದಾರೆ. ಇದನ್ನ ನಾವು ಬಹಳ ಗಂಭೀರವಾಗಿ ಪರಿಶೀಲಿಸುತ್ತಿದ್ದೇವೆ.

ಕಮಿಷನರ್​​ಗೆ ಹಾಗೂ ಅಧಿಕಾರಿಗಳಿಗೆ ಎಲ್ಲಾ ಶಾಲೆಗಳನ್ನ ಪರಿಶೀಲನೆ ಮಾಡುವಂತೆ ತಾಕೀತು ಮಾಡಿದ್ದೇನೆ ಎಂದರು. ಯಾವ ಉಗ್ರ ಸಂಘಟನೆ ಮಾಡಿದೆ, ಯಾರು ಇದನ್ನೆಲ್ಲಾ ಮಾಡಿದ್ದಾರೆ ಅನ್ನೋದು ಪರಿಶೀಲಿಸುತ್ತಿದ್ದೇವೆ. ಅವರು ಭಾರತದವ್ರೆ ಆಗಿದ್ರೆ ಅಂತವರಿಗೆ ಏನು ಮಾಡ್ಬೇಕು ಅಂತಾ ಭಾರತ ಸರ್ಕಾರದ ಜೊತೆ ಮಾತನಾಡ್ತೇವೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯೇ ಕಳುಹಿಸಿದೆ ಅನ್ನೋದನ್ನ ಇನ್ನೂ ಹೇಳೋಕಾಗಲ್ಲ. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಗೂ ತಿಳಿಸುತ್ತೇವೆ. ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ. ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಾವು ಎಲ್ಲಾ ಕ್ರಮ ತೆಗೆದುಕೊಳ್ತಿವಿ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್​ ಹೇಳಿದರು.

Comments (0)

Your email address will not be published. Required fields are marked *

Back to top button