ರಾಜ್ಯವಾಣಿಜ್ಯ

3ನೇ ಬಾರಿಗೆ ಬಿಯರ್ ದರ ಏರಿಕೆ; ಮದ್ಯ ಪ್ರಿಯರಿಗೆ ಶಾಕ್​ !

ಬೆಂಗಳೂರು  :  ರಾಜ್ಯ ಬಜೆಟ್‌ ದಿನವೇ ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದೆ. ಬಿಯರ್ ಪ್ರಿಯರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದೆ. ಕಳೆದ 7 ತಿಂಗಳಲ್ಲಿ ಬರೊಬ್ಬರಿ ಮೂರನೇ ಬಾರಿಗೆ ಬಿಯರ್ ದರದಲ್ಲಿ ಏರಿಕೆಯಾಗಿದೆ. ಇಂದಿನಿಂದ ಬಿಯರ್ ಬಾಟಲಿ ದರ 10 ರೂಪಾಯಿಂದ 15 ರೂಪಾಯಿ ಹೆಚ್ಚಳವಾಗಲಿದೆ. ರಾಜ್ಯ ಸರ್ಕಾರ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಶೇ.185 ರಿಂದ 195 ಕ್ಕೆ ಹೆಚ್ಚಳ ಮಾಡಿದೆ.

ರಾಜ್ಯ ಅಬಕಾರಿ‌ ಇಲಾಖೆ ಜನವರಿ 20ಕ್ಕೆ‌ ಸುಂಕ ಹೆಚ್ಚಳ ಕುರಿತಂತೆ ಕರಡನ್ನು ಪ್ರಕಟಿಸಿತ್ತು. ಕರ್ನಾಟಕ ಅಬಕಾರಿ ನಿಯಮ 1968 ತಿದ್ದುಪಡಿ ಮಾಡಲು ಕರಡು ಅಧಿಸೂಚನೆಯಲ್ಲಿ ಪ್ರಕಟ ಮಾಡಿತ್ತು. ಇದಕ್ಕೆ ರಾಜ್ಯ ಸರ್ಕಾರವು ಒಪ್ಪಿಗೆ ಸೂಚಿಸಿತ್ತು.ಆದರೆ ನಿನ್ನೆ ಸುಂಕ ಏರಿಕೆಯ ಕುರಿತು ಅಬಕಾರಿ ಇಲಾಖೆ ಅಂತಿಮ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತಯಾರಿಸುವ ಹಾಗೂ ಆಮದು ಮಾಡಿಕೊಳ್ಳುವ ಬಿಯರ್‌ನ ಮೇಲಿನ ಸುಂಕ ಹೆಚ್ಚು ಮಾಡಲಿದೆ.

ಕಳೆದ 7 ತಿಂಗಳಲ್ಲಿ ಬರೊಬ್ಬರಿ ಮೂರನೇ ಬಾರಿಗೆ ಬಿಯರ್ ದರದಲ್ಲಿ ಏರಿಕೆಕಂಡಿದೆ. ಸರ್ಕಾರ ಅಧಿಕಾರಕ್ಕೆ‌ ಬಂದಾಗ ಬಿಯರ್‌ ಮೇಲೆ ಶೇ.20 ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಹೆಚ್ಚಿಸಿದ್ದವು. ಬಿಯರ್ ಉತ್ಪಾದನ ಕಂಪನಿಗಳು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ಏರಿಕೆ ಮಾಡಿದ್ದವು.ಇದೀಗ ಅಬಾಕಾರಿ ಇಲಾಖೆ ಮತ್ತೆ ಬಿಯರ್‌ ದರ ಹೆಚ್ಚಳ ಮಾಡಿದೆ. ಆರೇಳು ತಿಂಗಳ ಅವಧಿಯಲ್ಲಿ ಬಿಯರ್‌ ಬೆಲೆ ಸುಮಾರು 30 ರಿಂದ 40 ರೂಪಾಯಿ ಹೆಚ್ಚಳವಾಗಿದೆ.

Comments (0)

Your email address will not be published. Required fields are marked *

Back to top button