ರಾಜ್ಯಸಿನಿಮಾಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ವಂಚಿಸಿದ್ರಾ ಡ್ರೋನ್ ಪ್ರತಾಪ್..?!

ಬಿಗ್​ ಬಾಸ್​​ ಕನ್ನಡ ಸೀಸನ್​ 10ರ ರನ್ನರ್​ ಅಪ್​ ಆಗಿ ಹೊರಬಂದಿರುವ ಡ್ರೋನ್​ ಪ್ರತಾಪ್​ ವಿರುದ್ಧ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಹೆಸರು ಹೇಳಿಕೊಂಡು ಡ್ರೋನ್​ ಪ್ರತಾಪ್​ ಅವರು ವಂಚನೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.  ಬಿಗ್​​ ಬಾಸ್​ ರನ್ನರ್​​ ಅಪ್​ ಡ್ರೋನ್​ ಪ್ರತಾಪ್​ ವಿರುದ್ಧ ಮತ್ತೊಂದು ದೂರು ದಾಖಲು ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಟಿಕೆಟ್​​ ಕೊಡಿಸುವ ನೆಪದಲ್ಲಿ ವಂಚನೆ ಮಾಡಿದ ಆರೋಪವೊಂದು ಕೇಳಿ ಬರುತ್ತಿದೆ. ಚಂದನ್​ ಕುಮಾರ್​​​ಗೌಡ ಎಂಬುವವರಿಂದ ನಗರ ಪೊಲೀಸ್​​ ಆಯುಕ್ತ ದಯಾನಂದ್​​ಗೆ ದೂರು ನೀಡಿದ್ದಾರೆ.

2 ಲಕ್ಷ ಹಣ ಪಡೆದು ಪ್ರತಾಪ್​ ವಂಚಿಸಿರುವ ಆರೋಪ ಕೇಳಿ ಬಂದಿದೆ. ಮಾಜಿ ಸಿಎಂ ಕುಮಾರಸ್ವಾಮಿ ಪರಿಚಯವಿದೆ ಎಂದು ಹೇಳಿಕೊಂಡು ವಂಚಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಒಂದು ಬಿಡುಗಡೆಯಾಗಿದೆ. ನಾನು ಆಗಾಗ ಕುಮಾರಸ್ವಾಮಿಯವರ ಫಾರ್ಮಹೌಸ್​ಗೆ  ಹೋಗಿ ಭೇಟಿಯಾಗುತ್ತೇನೆ ಎಂದು ನಂಬಿಸಿ  ಮೋಸ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್​​ ಕೊಡಿಸುವುದಾಗಿ ವಂಚಿಸಿರುವ ಆರೋಪ ಕೆಳಿ ಬರುತ್ತಿದೆ. ಬಿಗ್​​ ಬಾಸ್​​ನಿಂದ ಹೊರಬಂದ ನಂತರ ಕರೆ ಸ್ವೀಕರಿಸದೇ ಹಣ ಹಿಂದಿರುಗಿಸದೆ ವಂಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Comments (0)

Your email address will not be published. Required fields are marked *

Back to top button