ರಾಜ್ಯಸುದ್ದಿ

ಸ್ಕೂಲ್‌ಗೆ ಬಾಂಬ್ ಇಟ್ಟಿದ್ದೀವಿ 10:20ಕ್ಕೆ ಬ್ಲಾಸ್ಟ್ ಆಗುತ್ತೆ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕುವುದು ಮತ್ತೆ ಮುಂದುವರೆದಿದೆ. ನಗರದಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. Sahukarisrinuvasarao65@gmail.com ಎಂಬ ಇ-ಮೇಲ್ ಮೂಲಕ ಕೇಂದ್ರೀಯ ವಿದ್ಯಾಲಯ ಭಾರತೀಯ ವಿದ್ಯಾಸಂಸ್ಥೆಗೆ ಬಾಂಬ್ ಬೆದರಿಕೆ ಬಂದಿದೆ. ಸದ್ಯ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ಕೂಲ್ ಒಳಗೆ ಬಾಂಬ್ ಇಟ್ಟಿದ್ದೀವಿ. ಬೆಳಗ್ಗೆ 10:20ಕ್ಕೆ ಬ್ಲಾಸ್ಟ್ ಆಗುತ್ತೆ ಎಂದು ಆಗಂತಕರು ಮೇಲ್ ಮಾಡಿ ಬೆದರಿಸಿದ್ದಾರೆ. ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಅಲರ್ಟ್ ಆಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಗೆ ಬಂದ ಪೊಲೀಸ್ ಹಾಗು ಬಾಂಬ್ ಸ್ಕ್ವಾಡ್ ಪರಿಶೀಲನೆ ನಡೆಸಿದ್ದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ. ಸದ್ಯ ಕೇಂದ್ರೀಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

2023ರ ಡಿಸೆಂಬರ್​ ತಿಂಗಳಲ್ಲೂ ಇದೇ ರೀತಿ ಕೆಲ ಕಿಡಿಗೇಡಿಗಳು ಬೆಂಗಳೂರಿನ 60 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳಿಸಿ ಭಯದ ವಾತಾವರಣ ಸೃಷ್ಟಿಸಿದ್ದರು. ಇ ಮೇಲ್ ನಲ್ಲಿ ಶಾಲಾ ಕ್ರೀಡಾಂಗಣ, ಆವರಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಬರೆಯಲಾಗಿತ್ತು. ಇಂಥಾ ಸಂದೇಶ ಬಂದಿದ್ದ ಬರೋಬ್ಬರಿ 60 ಶಾಲೆಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಸಿಲಿಕಾನ್ ಸಿಟಿಯ ಶಾಲೆಗಳಿಗೆ ಮಾತ್ರವಲ್ಲ ಮಲೇಷ್ಯಾ , ಜರ್ಮನಿಯ ಕೆಲವು ಶಾಲೆಗಳಿಗೂ ಈ ರೀತಿಯ ಈ ಮೇಲ್ ಸಂದೇಶ ರವಾನೆಯಾಗಿತ್ತು.

Comments (0)

Your email address will not be published. Required fields are marked *

Back to top button