ಕ್ರಿಕೆಟ್ಮನರಂಜನೆ

ಮಗನ ಆಟ ವೀಕ್ಷಿಸಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

ಮೈಸೂರು : ಏಕದಿನ ವಿಶ್ವಕಪ್‌ ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ ಅವರು ತಮ್ಮ ಮಗನ ಸಲುವಾಗಿ ಪತ್ನಿ ಡಾ. ವಿಜೇತಾರೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ.


ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ ಮಾನಸ ಗಂಗೋತ್ರಿಯ ಶ್ರೀ ಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದ್ರಾವಿಡ್‌ ಅವರ ಹಿರಿಯ ಪುತ್ರ ಸಮಿತ್‌ ದ್ರಾವಿಡ್‌ 19 ವಯೋಮಿತಿ ಕೂಚ್‌ ಬೆಹರ್‌ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ.

ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ಮೈಸೂರಿನಲ್ಲಿ ಪಂದ್ಯ ನಡೆಯುತ್ತಿದ್ದು ಅದನ್ನು ವೀಕ್ಷಿಸುವ ನಿಟ್ಟಿನಲ್ಲಿ ದ್ರಾವಿಡ್‌ ಆಗಮಿಸಿದ್ದಾರೆ. ದಂಪತಿಗಳಿಬ್ಬರು ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದು, ತಮ್ಮ ಮಗ ಸಮಿತ್ ಅವರ ಆಟವನ್ನು ಕುತೂಹಲದಿಂದ ವೀಕ್ಷಿಸಿದರು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರಾಖಂಡ್‌ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್‌ಗೆ 232 ರನ್‌ ಪೇರಿಸಿದೆ. 5 ಓವರ್‌ ಬೌಲಿಂಗ್‌ ಮಾಡಿರುವ ಸಮಿತ್‌ ದ್ರಾವಿಡ್‌ 2 ಮೇಡನ್‌ ಎಸೆದು 11 ರನ್‌ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button