
ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ನಿವಾಸಕ್ಕೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನುಗ್ಗಲು ಯತ್ನಸಿದ್ದು ಪೊಲೀಸರು ತಡೆದಿದ್ದಾರೆ. ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸದ ಡಿಕೆ ಸುರೇಶ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅವರ ಮನೆಗೆ ಮುತ್ತಿಗೆ ಹಾಕೋ ಯತ್ನ ನಡೆಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪೊಲೀಸರು ಪ್ರತಿಭಟನಾ ನಿರತರನ್ನು ಬಲವಂತವಾಗಿ ತಡೆಯುವಾಗ ದರ್ಪ ಮೆರೆದಿರುವ ಆರೋಪ ಕೇಳಿಬಂದಿದೆ.

ಕರ್ನಾಟಕದಲ್ಲಿ ರಾವಣ ರಾಜ್ಯ ಅಸ್ಥಿತ್ವದಲ್ಲಿ ಇದ್ಯಾ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಯುವ ಮುಖಂಡರಾದ ಅನಿಲ್ ಶೆಟ್ಟಿ, ಪ್ರಶಾಂತ್, ಸಂದೀಪ್ ರವಿ, ಪ್ರತಾಪ್ ಸೇರಿ ಹಲವಾರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.




