ರಾಜ್ಯಸುದ್ದಿ

ಮಂಡ್ಯದಲ್ಲಿ ಆಪೇ ಆಟೋ ಚಾಲಕರ ಪ್ರತಿಭಟನೆ

ಮಂಡ್ಯ : ಆಪೇ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಹಿನ್ನಲೆ. ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ಕೊಡಬೇಕೆಂದು ಮಂಡ್ಯದಲ್ಲಿ ಆಪೇ ಆಟೋ ಚಾಲಕರಿಂದ ಪ್ರತಿಭಟನೆ ನಡೆಸಿದರು.

ಜಯ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ನಗರದ ಮೈಶುಗರ್​ ವೃತ್ತದಿಂದ ಡಿಸಿ ಕಛೇರಿಯವರೆಗೆ ನೀವು ಬದುಕಿ ನಮ್ಮನ್ನು ಬದುಕಲು ಬಿಡಿ ಎಂದು ಘೋಷಣೆ ಕೂಗುವ ಮೂಲಕ ಮೆರವಣಿಗೆ ಮಾಡಿದರು. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ನಂತರ ಆಟೋ ನಂಬಿ ಬದುಕುತ್ತಿದ್ದ ಚಾಲಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಂಡ್ಯ ನಗರದಲ್ಲಿ ಸಂಚರಿಸುವ ಪ್ರಯಾಣಿಕರನ್ನ ಆಟೋದವರು ನಗರ ಪ್ರದೇಶದಲ್ಲಿ ಪ್ರಯಾಣಿಕರನ್ನು ಹತ್ತಿಕೊಂಡು ಸಂಚಾರ ಮಾಡುತ್ತಾರೆ ಎಂದು ತಪ್ಪಾಗಿ ಭಾವಿಸಿದ್ದಾರೆ ಇದು ಸರಿಯಲ್ಲ. ಆಪೇ ಆಟೋಗಳು ಗ್ರಾಮೀಣ ಪ್ರದೇಶದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಮಂಡ್ಯದ ಬಸ್ ನಿಲ್ದಾಣ, ರೈಲು ನಿಲ್ದಾಣ ಹತ್ತಿರ ಇಳಿಸಿ ಮತ್ತೆ ಗ್ರಾಮೀಣ ಪ್ರದೇಶಕ್ಕೆ ಖಾಲಿ ಹೋಗುತ್ತಿವೆ.

ಎಲ್ಲರೂ ಸಹ ಸಾಲ ಮಾಡಿ ಆಟೋ ಖರೀದಿ ಮಾಡಿರುತ್ತಾರೆ. ಯಾರ ಆದಾಯಕ್ಕೂ ಕತ್ತರಿ ಬೀಳಬಾರದು ಎಂಬ ಮನೋಭಾವ ನಮ್ಮದು. ನಾವೆಲ್ಲರೂ ಒಗ್ಗೂಡಿ ಸಹಜೀವನ ನಡೆಸಬೇಕು. ನಮ್ಮ ಜೀವನಕ್ಕೆ ನಾವು ಕಲ್ಲು ಹಾಕಿಕೊಳ್ಳಬಾರದು.ಈಗಾಗಲೇ ಸಾಲ ತೀರಿಸಲು ಸಾಧ್ಯವಾಗದೆ ಆಪೇ ಆಟೋದ ಏಳು ಚಾಲಕರು ನೇಣಿಗೆ ಕೊರಳೋಡ್ಡಿದ್ದಾರೆ., ನಮ್ಮ ಪರಿಸ್ಥಿತಿಯನ್ನು ಕೂಡ ಅರಿತುಕೊಂಡು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ರು.

ನಗರ ಪ್ರದೇಶದಲ್ಲಿ ಆಪೇ ಆಟೋ ಗಳಿಗೆ ದಂಡ ಹಾಕುತ್ತಿರುವುದನ್ನು ನಿಲ್ಲಿಸಬೇಕು‌. ಎಲ್ಲಾ ಮಾದರಿ ಆಟೋಗಳಿಗೆ ಒಂದೇ ರೀತಿಯ ನ್ಯಾಯ ದೊರಕಿಸಿಕೊಡಿ ಇಲ್ಲದಿದ್ದರೆ ದಯಾಮರಣ ಕಲ್ಪಿಸಿ ಎಂದು ಒತ್ತಾಯಿಸಿದ್ದಾರೆ.

Comments (0)

Your email address will not be published. Required fields are marked *

Back to top button