ಯಾದಗಿರಿ : ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ.ಟಿ. ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಅಮಾನತು ಮಾಡಿ ಇಲಾಖೆ ಅಧೀನ ಕಾರ್ಯದರ್ಶಿ ಎಲ್. ನರಸಿಂಹ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿಡಿ ಆಗಿರುವ ಸರೋಜಾ ಅವರು, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಜಿಲ್ಲೆಗಳ ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಅಗತ್ಯ ಸೌಕರ್ಯಗಳನ್ನು ಕಲ್ಪಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಉಪಲೋಕಾಯುಕ್ತರು 2023ರ ನವೆಂಬರ್ 18 ರಿಂದ 20 ರವರೆಗೆ ಯಾದಗಿರಿ ಪ್ರವಾಸದ ವೇಳೆ ವಸತಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿದ್ರು. ಈ ವೇಳೆ ಯಾದಗಿರಿ ನಗರದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿರುವ ವೇಳೆ ಹಲವಾರು ನ್ಯೂನತೆ ಬೆಳಕಿಗೆ ಬಂದಿದೆ.
ಹೀಗಾಗಿ ಕರ್ತವ್ಯ ನಿರ್ಲಕ್ಷ್ಯತನ ಹಾಗೂ ಬೇಜವಾದ್ದಾರಿತನ ಆರೋಪಗಳ ಹಿನ್ನಲೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡತಕ್ಕದಲ್ಲವೆಂದು ಸೂಚನೆ ನೀಡಿದರು.