ಜಿಲ್ಲೆ

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪ್ರೊಟೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದ ಬಳಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.


ತಲೆ ಮೇಲೆ ಖಾಲಿ ಕೂಡ ಇಟ್ಟುಕೊಂಡು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಜಾರಿಗೆ ಅನಗತ್ಯ ವಿಳಂಬ ಆರೋಪ ಹಿನ್ನಲೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಹದಾಯಿ ವಿಷಯ ಚರ್ಚಿಸುವಂತೆ ಆಗ್ರಹಿಸಿದರು. ಕೂಡಲೇ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಇಲ್ಲವಾದಲ್ಲಿ ‌ಉಗ್ರ ಹೋರಾಟ ಮಾಡುವಂತೆ ಹೋರಾಟಗಾರರು ಎಚ್ಚರಿಕೆ ನೀಡಿದರು.

Comments (0)

Your email address will not be published. Required fields are marked *

Back to top button