ರಾಜ್ಯಸುದ್ದಿ

KSRTC ಬಸ್‌ಗೆ ಗುದ್ದಿದ ಲಾರಿ; ರಕ್ತದ ಮಡುವಿನಲ್ಲಿ ನರಳಾಡಿದ ಮಹಿಳೆ

ಬೆಂಗಳೂರು: ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಹೊಸಕೋಟೆ ಬಳಿ ನಡೆದಿದೆ.

ವೇಗವಾಗಿ ಬಂದ ಲಾರಿ ಬಸ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಅದರಲ್ಲೂ ಓರ್ವ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು. ಕೂಡಲೇ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button