ರಾಜಕೀಯರಾಜ್ಯಸುದ್ದಿ

ಸುತ್ತೂರು ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ಅಮಿತ್ ಶಾ

ಮೈಸೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುತ್ತೂರು ಭೇಟಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಮಿತ್ ಅಮಿತ್ ಶಾಗೆ ದೇವಾಲಯದ ವತಿಯಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿ ಸ್ಥಳೀಯ ಮುಖಂಡರೂ ಅಮಿತ್ ಶಾ ಅವರನ್ನು ಸ್ವಾಗತ ಮಾಡಿದರು. ಕಳಸ, ಮಂಗಳವಾದ್ಯದ ಮೂಲಕ ಗೃಹ ಸಚಿವರನ್ನು ಅರ್ಚಕರು ಬರಮಾಡಿಕೊಂಡರು.

ಗೃಹ ಸಚಿವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ, ಸಿ.ಟಿ.ರವಿ ಸಾಥ್ ನೀಡಿದರು. ಅಮಿತ್ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ಹಿನ್ನೆಲೆಯಲ್ಲಿ ದೇವಾಲಯದ ಮುಂಭಾಗ ಬ್ಯಾರಿಕೇಡ್ ಹಾಕಲಾಗಿತ್ತು.

ಅಲ್ಲದೆ ಮಧಾಹ್ನ 2:15 ರಿಂದ ಸಂಜೆ 4 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ನಿರ್ಭಂದ ಹೇರಲಾಗಿದೆ. ಸಂಜೆ 4ರ ಬಳಿಕ ಮತ್ತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ದೇವಾಲಯದ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಬಳಿಕ ರ‌್ಯಾಡಿಸನ್ ಬ್ಲೂ ಹೋಟೆಲ್ ಗೆ ತೆರಳಿದರು. ಹೋಟೆಲ್ ನಲ್ಲಿ ಪ್ರಮುಖ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲಿದ್ದಾರೆ.

Comments (0)

Your email address will not be published. Required fields are marked *

Back to top button