ರಾಜ್ಯಸುದ್ದಿ

ಡೆತ್ ನೋಟ್ ಬರೆದಿಟ್ಟು ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ

ಗದಗ: ಕಾಂಗ್ರೆಸ್​ ಮುಖಂಡ ಶಶಿಧರ್ ಹಟ್ಟಿ ಅವರು ಲುಂಗಿಯಿಂದ ನೇಣು ಹಾಕಿಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಳು ದಂಧೆಯಲ್ಲಿ ಮೂವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಎಲ್ಲ ಲೆಕ್ಕ ಕೊಟ್ರು ಪದೇ ಪದೇ ಶರಣಗೌಡ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಮನನೊಂದು ಆತ್ಮಹತ್ಯೆ ಅಂತ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.

ಉಸ್ತುವಾರಿ ಸಚಿವ ಎಚ್ ಕೆ ಪಾಟೀಲರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಅಂತ ಪತ್ರದಲ್ಲಿ ಉಲ್ಲೇಖ ಮಾಡಲಾಗಿದ್ದು, ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

https://www.youtube.com/watch?v=YqIuTjIegIk

Comments (0)

Your email address will not be published. Required fields are marked *

Back to top button