Thursday, May 1, 2025
30.3 C
Bengaluru
LIVE
ಮನೆUncategorizedಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದ್ರ ಕುಮಾರಸ್ವಾಮಿ? ರಾಜ್ಯಸಭಾ ಅಖಾಡಕ್ಕೆ ಬಿಗ್ ಟ್ವಿಸ್ಟ್, JDSನಿಂದ ಕುಪೇಂದ್ರ ರೆಡ್ಡಿ

ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದ್ರ ಕುಮಾರಸ್ವಾಮಿ? ರಾಜ್ಯಸಭಾ ಅಖಾಡಕ್ಕೆ ಬಿಗ್ ಟ್ವಿಸ್ಟ್, JDSನಿಂದ ಕುಪೇಂದ್ರ ರೆಡ್ಡಿ

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಹೆಚ್ಡಿಕೆ , ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು ಎಂದರು.ಇನ್ನು ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಈ ಕಾರಣಕ್ಕೆ ಈ ತೀರ್ಮಾನ ಮಾಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯಸಭೆ ಚುನಾವಣೆಗೆ ಕೊನೆಯ ಕ್ಷಣದಲ್ಲಿ ಐದನೇ ಅಭ್ಯರ್ಥಿ ಹಾಕುವ ಮೂಲಕ ಹೆಚ್ಡಿ ಕುಮಾರಸ್ವಾಮಿ ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದರೇ ಎಂಬ ಪ್ರಶ್ನೆ ಉದ್ಭವಿಸಿದೆ. 2013 ರ ರಾಜ್ಯಸಭೆ ಚುನಾವಣೆಯಲ್ಲಿ ಏಳು ಜನ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿದ್ದರು. ಇದರಿಂದ ಕುಮಾರಸ್ವಾಮಿಗೆ ಬಾರಿ ಮುಖಭಂಗವಾಗಿತ್ತು. ಹೀಗಾಗಿ ಕೊನೆ ಹಂತದಲ್ಲಿ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡುವ ಮೂಲಕ ಅಡ್ಡ ಮತದಾನದ ತಂತ್ರವನ್ನು ಕುಮಾರಸ್ವಾಮಿ ಹೆಣೆದಿದ್ದಾರೆ ಎನ್ನಲಾಗಿದೆ. ಈಗಾಲೆ ಜೆಡಿಎಸ್, ಬಿಜೆಪಿ ನಾಯಕರು ಬಿಜೆಪಿ ಶಾಸರನ್ನು ಸಂಪರ್ಕ ಮಾಡುತ್ತಿದ್ದಾರೆ. ಆರು ಶಾಸಕರ ಸಂಪರ್ಕ ಮಾಡಿ ಮಾತುಕತೆ ನಡೆಸಲಾಗಿದೆ. ಶತಾಯಗತಾಯ ಕುಪೇಂದ್ರ ರೆಡ್ಡಿ ಗೆಲ್ಲಿಸಲು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದ್ದು, ಹೀಗಾಗಿ ತೆರೆಮರೆ ಕಸರತ್ತು ಜೋರಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments