ಚಿಕ್ಕಮಗಳೂರು : 20 ವರ್ಷಗಳಿಂದ ಕಣ್ಮರೆಯಾಗಿದ್ದ ಮೂಡಿಗೆರೆ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ನನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ವಿಚಾರ ತಿಳಿದು ದಾಳಿ ನಡೆಸಿದ ಪೊಲೀಸರು ಸುರೇಶ್ನನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ 10 ವರ್ಷಗಳಿಂದ ಭೂಗತ ನಕ್ಸಲ್ ಆಗಿದ್ದಾನೆ. ಪೊಲೀಸ್ ಇಲಾಕಡ, ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು. ಕೇರಳ ಕರ್ನಾಟಕ ಗಡಿ ಪ್ರದೇಶದ ಅರಣ್ಯದಲ್ಲಿ ಸುರೇಶ್ ಅಡಗಿದ್ದ. ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿವೆ. 10 ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿಯಾಗಿದ್ದಾನೆ. ಸರ್ಕಾರ ಸುರೇಶ್ನನ್ನು ಹಿಡಿದು ಕೊಟ್ಟವರಿಗೆ 5 ಲಕ್ಷ ಬಹುಮಾನ ಸಹ ಘೋಷಿಸಿತ್ತು. ಕೇರಳದ ಕಾನನದಲ್ಲಿ ಓಡಾಡಿಕೊಂಡಿದ್ದ ಇವನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ಸುರೇಶ್ ಅಲಿಯಾಸ್ ಮಹದೇವನನ್ನು ಚಿಕಿತ್ಸೆ ಕೊಡಿಸಿ ನಂತರ ಇವನ ಬಗ್ಗೆ ವಿಚಾರಣೆ ನಡೆದ ವೇಳೆ ಈತ ನಕ್ಸಲ್ ಎಂಬುದು ತಿಳಿದು ಬಂದಿದೆ.