ಕಲಬುರ್ಗಿ: ಕಲಬುರ್ಗಿ ನಗರದ ವಿವಿಧ ಕಾಲೋನಿಗಳಲ್ಲಿ ಮನೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಕೋಟನೂರ ಬಳಿ ಅನುಮಾನಾಸ್ಪದವಾಗಿ ಬೈಕ್ಗಳ ಮೇಲೆ ಓಡಾಡುತ್ತಿದ್ದ ಸಂದರ್ಭದಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ನಂತರ ಆರೋಪಿಗಳು ನಗರದ ವಿವಿಧೆಡೆ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಚೇತನ್ ತಿಳಿಸಿದ್ದಾರೆ.
ಅಗಲು ಚಹ್ವಾಣ ಹಾಗೂ ಸಿತಾರಾಮ ಚಹ್ವಾಣ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ ಬಂಗಾರ ಬೆಳ್ಳಿ ಸೇರಿ ಒಟ್ಟು 5,28,000 ಮೌಲ್ಯದ ಮುದ್ದೆ, ಎರಡು ಮೋಟಾರು ಸೈಕಲ್ ಕೂಡ ವಶಕ್ಕೆ ಪಡೆಯಲಾಗಿದೆ. ಇನ್ನೂ ಇಬ್ಬರು ಪರಾರಿಯಾಗಿದ್ದು ಅವರನ್ನು ಬಂಧಿಸಲಾಗುತ್ತದೆ ಎಂದರು. ಇತ್ತಿಚೆಗೆ ಕಲಬುರ್ಗಿಯ ಕುಬೇರಾ ಕಾಲೋನಿಯಲ್ಲಿ ಕಳ್ಳರು ಓಡಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದೇ ಕಳ್ಳರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದರು.