ಹುಬ್ಬಳ್ಳಿ : ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು.

ಜೈ ಭೀಮ ಯುವ ಶಕ್ತಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ನಗರದ ಶ್ರೀ ಸಿದ್ಧಾರೂಢ ರೈಲ್ವೆ ನಿಲ್ದಾಣದಲ್ಲಿ ಅನುಮತಿ ನೀಡಲು ಒತ್ತಾಯಿಸಿ ರೈಲ್ವೆ ನಿಲ್ದಾಣ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ದೇಶದ ಮುಖ್ಯ ಸ್ಥಳಗಳಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮೂರ್ತಿ ಸ್ಥಾಪನೆ ಮಾಡಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಅಂಬೇಡ್ಕರ್ ಮೂರ್ತಿ ಸ್ಥಾಪನೆ ಮಾಡಿದ್ದರೆ ಮತ್ತಷ್ಟು ಗೌರವ ಹೆಚ್ಚಾಗುತ್ತದೆ. ಈ ಕೂಡಲೇ ರೈಲ್ವೆ ಇಲಾಖೆ ನಮ್ಮ ಬೇಡಿಕೆಗೆ ಸ್ಪಂದನೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟದ ಕಡೆ ಚಿಂತನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.


