
ಗದಗ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಗದಗನ ಬೆಟಗೇರಿ ಪೊಲೀಸ್ ಠಾಣೆ ಕೂಗಳತೆಯ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಬೆಟಗೇರಿಗೆ ಆಗಮಿಸುತ್ತಿದ್ದ ಲಾರಿಯು ಪೊಲೀಸ್ ಠಾಣೆ ಬಳಿ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿಹೊಡೆದಿದೆ. ಲಾರಿಯಲ್ಲಿದ್ದ ಡ್ರೈವರ್ ಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊತದ ರಭಸಕ್ಕೆ ಲಾರಿ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಬಾಗಿದ್ದು, ವಿದ್ಯುತ್ ಸಂಪರ್ಕ ಕಡಿತವಾಗಿದೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿ ಬಳಿ ಘಟನೆ ಸಂಭವಿಸಿದ್ದು, ಮಾಹಿತಿ ಕಲೆ ಹಾಕಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ




