ರಾಜಕೀಯರಾಜ್ಯಸುದ್ದಿ

ಅಡ್ಡ ಮತದಾನಕ್ಕೆ ಬ್ರೇಕ್​: ಡಿಸಿಎಂ ಡಿ.ಕೆ. ಶಿವಕುಮಾರ್

ಹಿಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆಗೂ ಮುನ್ನಾ ಪ್ರತಿಕ್ರಿಯಿಸಿರುವ ಡಿಕೆಶಿ, ಶಾಸಕರಿಗೆ ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ ಹಾಗೂ ಅಣಕು ಮತದಾನ ಮಾಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಅಲ್ಲದೇ ಇಂದು ಅಣಕು ಮತದಾನ ನಡೆಸಿ, ನಾಳೆ ಹೋಟೆಲ್ ನಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ನಮ್ಮ ಶಾಸಕರು ಮತದಾನ ಮಾಡಲಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ನಾಳೆ ಮತದಾನದ ವೇಳೆ ಅಡ್ಡಮತದಾನ ನಡೆಯಲಿದೆಯೆ ಎಂದು ಕೇಳಿದಾಗ, “ನಮ್ಮ ಕಡೆಯಿಂದ ಯಾವುದೇ ಅಡ್ಡ ಮತದಾನ ನಡೆಯುವುದಿಲ್ಲ” ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button