Freedom TV

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ : ಮೂರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. 6ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿ ಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಝಳ ತಾಕಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ.

ಇನ್ನು ..ಘಟನೆ ನಡೆದ ಕೊಠಡಿಯಲ್ಲಿ 16 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ. ಶಾಲೆಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಭೇಟಿ ನೀಡಿ ಘಟನೆಯ ಮಾಹಿತಿ ಸಂಗ್ರಹಿಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ವರದಿ ಸಲ್ಲಿಸಿದ್ದಾರೆ.

ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಇದು ಎರಡನೇ ಘಟನೆ ಎನ್ನಲಾಗಿದೆ. ಅಗ್ನಿ ಅವಘಡ ಸಂಭವಿಸಿದ್ದರೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸದೆ ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿದೆ. ಇನ್ನು ಅಧಿಕಾರಿಗಳ ನಿರ್ಲಕ್ಷ್ಯ ತೋರಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

Comments (0)

Your email address will not be published. Required fields are marked *

Back to top button