ಕೋಲಾರ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದ ಕೆ .ಎಸ್.ಆರ್.ಟಿ.ಸಿ. ಮುಂಭಾಗ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಕೋಲಾರ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಬಿಜೆಪಿಯ ನೂರಾರು ಕಾರ್ಯಕರ್ತರು ಜಮಾವಣೆಯಾಗಿ ಕಾಂಗ್ರೆಸ್ ವಿರುದ್ದ ರಸ್ತೆ ತಡೆದು ಪ್ರತಿಭಟನೆ ನಡೆಸಿ ಕಾಂಗ್ರೆಸ್ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿದ್ದು ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಕೂಡಲೇ ಬಂದಿಸಿ ಶಿಕ್ಷೆ ಕೊಡುವ ಮೂಲಕ ರಾಷ್ಟ್ರದ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು , ಪಾಕಿಸ್ತಾನ ಏಜೆಂಟ್, ದೇಶದ್ರೋಹಿ ನಾಸಿರ್ ಹುಸೇನ್ ಎಂದು ಆಕ್ರೋಶ ವ್ಯಕ್ತಪಡಿಸಿ ನಾಸಿರ್ ಭಾವಚಿತ್ರವನ್ನು ಚಪ್ಪಲಿಯಲ್ಲಿ ತುಳಿದು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಿಂದೂ ವಿರೋಧಿ ತನವನ್ನು ತೋರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯೆಕ್ತ ಪಡಿಸಿದರು.
ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಎರಡು ಕೆಎಸ್ ಆರ್ಟಿಸಿ ಬಸ್ನೊಂದಿಗೆ ಸಜ್ಜಾಗಿ ನಿಂತಿದ್ದ 250 ಕ್ಕೂ ಅಧಿಕ ಪೋಲೀಸರು ಬಿಜೆಪಿ ಕಾರ್ಯಕರ್ತರು ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್ ಭಾವಚಿತ್ರಕ್ಕೆ ಚಪ್ಪಲಿ ಇಂದ ಹೊಡೆದು ಬೆಂಕಿ ಹಚ್ಚಲು ಮುಂದಾದಾಗ ತಡೆದರು , ಇದರಿಂದ ಕುಪಿತರಾದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟು ನಿಂತಾಗ ಪೋಲೀಸರು ತಡೆದು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ ನಲ್ಲಿ ಕರೆದು ಎರಡು ಬಸ್ಗಳಲ್ಲಿ ಪೋಲೀಸ್ ಠಾಣೆಗೆ ಕರೆದೊಯ್ಯಲಾಯಿತು.