Monday, December 8, 2025
18.9 C
Bengaluru
Google search engine
LIVE
ಮನೆರಾಜಕೀಯಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಅಲ್ಲಾ: ಸಾ,ರಾ,ಮಹೇಶ್

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಅಲ್ಲಾ: ಸಾ,ರಾ,ಮಹೇಶ್

ಮೈಸೂರು ; ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಸಾರಾ,ಮಹೇಶ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಾ.ರಾ ಮಹೇಶ್, ನನ್ನ ಮಾನಸಿಕ, ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ನಾನು ಕಳೆದ 35 ವರ್ಷಗಳಿಂದಲೂ ಬಿಜೆಪಿ ಜೊತೆ ಒಡನಾಟ ಇದೆ. ಆದರೆ ಯಾರನ್ನೂ ಚುನಾವಣೆ ವಿಚಾರವಾಗಿ ಭೇಟಿ ಮಾಡಿಲ್ಲ. ಅದರ ಬಗ್ಗೆ ಚರ್ಚೆ ಆಗಿಲ್ಲ ಎಂದರು.

ಸದ್ಯಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರೇ ಕಣಕ್ಕಿಳಿಯಲಿದ್ದಾರೆ. ನಮ್ಮದು ಒಂದೇ ಗುರಿ ಇನ್ನೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡೋದು ಒಂದೇ ಗುರಿ ಎಂದರು.

ಸದ್ಯಕ್ಕೆ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿರುವ ಚರ್ಚೆ ಸತ್ಯಕ್ಕೆ ದೂರ. ನನಗೆ ಯಾವ ಚುನಾವಣೆಗೂ ಸ್ಪರ್ಧೆ ಮಾಡುವ ಆಸಕ್ತಿ ಇಲ್ಲ. ನಮ್ಮ ನಾಯಕರು ಕುಮಾರಸ್ವಾಮಿ ಅವರು ಇದರ ಬಗ್ಗೆ ಏನು ನಿರ್ಧಾರ ಮಾಡುತ್ತಾರೆ ಗೊತ್ತಿಲ್ಲ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದರು. ಈ ಚುನಾವಣೆ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವುದು ಊಹಾಪೋಹಗಳಷ್ಟೇ ಎಂದು ಸಾರಾ, ಮಹೇಶ್ ಸ್ಪಷ್ಟನೆ ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments