Freedom TV
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಪೊಲೀಸ್ ಆಯುಕ್ತರಿಂದ ಪತ್ರಿಕಾ ಪ್ರಕಟಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇಂದು ಸ್ಫೋಟ ಸಂಭವಿಸಿದ್ದು. ಹೋಟೆಲ್ನಲ್ಲಿದ್ದ 10 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ..

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಎಲ್ ಠಾಣೆಯಲ್ಲಿ unlawful activities Act 1967 ರಂತೆ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು, ಮತ್ತು ಬಾಂಬ್ ನಿಷ್ಕ್ರೀಯ ದಳದವರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ ಎಂದು ತಿಳಿಸಲಾಗಿದೆ.



