ಸುದ್ದಿ

ಲೋಕಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ದೆಹಲಿಯಲ್ಲಿ ಬಿಜೆಪಿ ನಾಯಕ ವಿನೋದ್ ಥಾವ್ಡೆ ಸುದ್ದಿಗೋಷ್ಠಿ ನಡೆಸಿ, ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನೀಡಿದ್ದೇವೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ. ಜನರ ಆಶೀರ್ವಾದ ಎರಡು ಬಾರಿ ಗೆಲುವು ಸಿಕ್ಕಿದೆ ಎಂದರು.

ಬಳಿಕ 195 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್​ ಮಾಡಲಾಗಿದೆ. ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳ ಅಭ್ಯರ್ಥಿಗಳು ಫೈನಲ್ ಮಾಡಲಾಗಿದೆ. 28 ಮಹಿಳೆಯರಿಗೆ ಹಾಗೂ 34 ಕೇಂದ್ರ ಸಚಿವರಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಇಬ್ಬರು ಮಾಜಿ ಸಿಎಂ, 50 ವರ್ಷದ ಒಳಗಿನ 47 ಅಭ್ಯರ್ಥಿಗಳು, 47 ಯುವಕರು, ಎಸ್ ಸಿ-27, ಎಸ್ ಟಿ- 18, ಒಬಿಸಿ-57 ಅಭ್ಯರ್ಥಿಗಳ ಪಟ್ಟಿ ರಿಲೀಸ್​ ಮಾಡಲಾಗಿದೆ. ರಾಜ್ಯದ ಅಭ್ಯರ್ಥಿಗಳ ಹೆಸರುಗಳನ್ನು ಹೈಕಮಾಂಡ್ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ, ನರೇಂದ್ರ ಮೋದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Comments (0)

Your email address will not be published. Required fields are marked *

Back to top button