ರಾಜ್ಯಸುದ್ದಿ

ಪಲ್ಸ್ ಪೋಲಿಯೋ ಲಸಿಕೆ ಹಾಕಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಬಳ್ಳಾರಿ ನಗರದ ಗಾಂಧಿನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಅಯುಷ್ಮಾನ್ ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ‌ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು.

ಇದೇ ಸಂದರ್ಭದಲ್ಲಿ ಲಸಿಕಾ ಕೇಂದ್ರಕ್ಕೆ ಬಂದ ಮಕ್ಕಳಿಗೆ ಚಾಕೊಲೇಟ್ ಹಂಚಿದರಲ್ಲದೆ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ಮಗುವಿಗೂ ಚಾಕೊಲೇಟ್ ಹಂಚುವಂತೆ ಆರೋಗ್ಯ ಸಿಬ್ಬಂದಿಗೆ ಸೂಚಿಸಿ ಚಾಕೊಲೇಟ್ ಬಾಕ್ಸ್ ನೀಡಿದರು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಆರ್ ಸಿ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ ಸೇರಿದಂತೆ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

Comments (0)

Your email address will not be published. Required fields are marked *

Back to top button