ಬೆಂಗಳೂರು: ಬಾರೀ ವಿವಾದ ಸೃಷ್ಠಿಸಿದ್ದ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ..ದೆಹಲಿ ಮೂಲದ ಇಲ್ತಾಜ್, ಆರ್ ಟಿನಗರದ ಮುನಾವರ್, ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತ ಆರೋಪಿಗಳು.
ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ್ದವರನ್ನ ಇಂದು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ..ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ ಬಳಿಕ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು.


