ಸುದ್ದಿ

ಮೈಸೂರು : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮೈಸೂರು ; ಪತ್ನಿ ಜೊತೆ ವೀಡಿಯೋ ಕಾಲ್​​ನಲ್ಲಿ ಮಾತನಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರಿನ ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು.

ರೈಲ್ವೆ ಹಳಿ ಪಕ್ಕದಲ್ಲಿ ನಡೆದುಕೊಂಡು ಬೆಳಿಗ್ಗೆ ಪತ್ನಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದನು. ಈ ಸಂದರ್ಭದಲ್ಲಿ ಮಿಸ್ ಆಗಿ ರೈಲ್ವೆ ಹಳಿಯಲ್ಲಿ ನಡೆಯುತ್ತಿದ್ದನು. ದುರದೃಷ್ಟವಶಾತ್ ಇದೇ ವೇಳೆಗೆ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. ಘಟನೆ ಸಂಭಂದ ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button