ರಾಜ್ಯಸುದ್ದಿ

ರಾಮನಗರದಲ್ಲಿ ಗುಂಡಿನ ಸದ್ದು: ರೌಡಿಶೀಟರ್​ಗೆ ಫೈರ್

ರಾಮನಗರ : ರಾಮನಗರ ಜಿಲ್ಲೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದ್ದು. ನಟೋರಿಯಸ್‌ ರೌಡಿಶೀಟರ್‌ ಕಾಲಿಗೆ ಗುಂಡೇಟು ಹಾರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೈಕಲ್‌ ಗಿರಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಸೈಕಲ್‌ ಗಿರಿಯನ್ನು ಸ್ಥಳ ಮಹಜರಿಗೆ ಪೊಲೀಸರು ಕರೆದುಕೊಂಡು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಕಗ್ಗಲಿಪುರ ಠಾಣೆಯ ಪಿಎಸ್‌ಐ ಲೋಕೇಶ್‌ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.

Comments (0)

Your email address will not be published. Required fields are marked *

Back to top button