ಡಾಲಿ ನಟನೆಯ ಉತ್ತರ ಕಾಂಡ ಸಿನಿಮಾ ತಂಡಕ್ಕೆ ಕಲಾವಿದರ ದಂಡೆ ಸೇರ್ಪಡೆಯಾಗುತ್ತಿದೆ. ಇದೀಗ ಹ್ಯಾಟ್ರಿಕ್ ಹೀರೋ ಶಿವಣ್ಣ ಉತ್ತರಕಾಂಡ ಚಿತ್ರದ ಭಾಗವಾಗಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಉತ್ತರ ಕಾಂಡ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದು ಜೊತೆಗೆ ಪತ್ನಿ ಗೀತ ಕೂಡ ಹೋಗಿದ್ದಾರೆ.ಇತ್ತೀಚೆಗಷ್ಟೇ ಉತ್ತರಕಾಂಡ ಸಿನಿಮಾದಲ್ಲಿ,ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿತ್ತು ಡಾಲಿಗೆ ಜೋಡಿಯಾಗಿ ಐಶ್ವರ್ಯ ರಾಜೇಶ್ ಎಂಟ್ರಿ ಕೊಟ್ಟಿದ್ದರು.
ಚೈತ್ರ ಆಚಾರ್ ನಿಗನ್ ಪಾತ್ರದ ಬಗ್ಗೆ ರಿವಿಲ್ ಆದ ಬೆನ್ನಲ್ಲೇ ಐಶ್ವರ್ಯ ರಾಜೇಶ್ ಕೂಡ ಸಿನಿಮಾ ತಂಡ ಸೇರಿದ್ದಾರೆ ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ.. ಈ ಮೂಲಕ ಮೊದಲ ಬಾರಿಗೆ ಸ್ಯಾಂಡಲ್ ವುಡ್ ಗೆ ನಾಯಕಿಯಾಗಿ ಲಗ್ಗೆ ಇಟ್ಟಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಉಮಾಶ್ರೀ ಉತ್ತರಖಂಡ ಟೀಮ್ ಸೇರಿಕೊಂಡಿದ್ದಾರೆ ಈ ಸಿನಿಮಾದಲ್ಲಿ ಅವರು ಪಂಡರಿ ಬಾಯಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರನ್ನು ಚಿತ್ರತಂಡ ಈಗಾಗಲೇ ಬಿಡುಗಡೆ ಮಾಡಿದ್ದು ಈ ಸಿನಿಮಾದಲ್ಲಿ ಸಾಕಷ್ಟು ಹಿರಿಯ ಕಲಾವಿದರು ನಟಿಸುತ್ತಿರುವುದು ವಿಶೇಷ