ಜಿಲ್ಲೆಸುದ್ದಿ

ಬೆಂಗಳೂರಿಗೆ ಹೊರಟಿದ್ದ ಬಸ್‌ಗೆ ಕಾರು ಡಿಕ್ಕಿ; ನಜ್ಜುಗುಜ್ಜಾದ ಕಾರಿನಲ್ಲಿ ಬೆಂಕಿ

ಕರ್ನೂಲ್ : ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬಂದ ಕಾರು, ಬೆಂಗಳೂರಿಗೆ ಹೊರಟಿದ್ದ ಗ್ರೀನ್ ಲೈನ್ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ.

ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಬಸ್ ಪ್ರಯಾಣಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಿದ್ದಾರೆ. ಗಾಯಗೊಂಡಿದ್ದ ಕಾರು ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ನಂತರ ಬಸ್ ಪ್ರಯಾಣಿಕರು ಸುಮಾರು ಎರಡು ಗಂಟೆಗಳ ಕಾಲ ತೀವ್ರ ಚಳಿಯಲ್ಲಿ ರಸ್ತೆಯಲ್ಲೇ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

Comments (0)

Your email address will not be published. Required fields are marked *

Back to top button