Thursday, January 29, 2026
20.3 C
Bengaluru
Google search engine
LIVE
ಮನೆ#Exclusive Newsವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ

ಕೆಂಪು ಸೀರೆಯಲ್ಲಿ ಕಂಗೊಳಿಸಿದ ನಾಡದೇವತೆ ಚಾಮುಂಡೇಶ್ವರಿ ದೇವಿ - Andolana

 

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.

ಚಾಮುಂಡೇಶ್ವರಿ ತಾಯಿಯಿಂದಾದರೂ ಭ್ರೂಣ ಹತ್ಯೆಯಂತಹ ಪಿಡುಗು ತಗ್ಗಲಿ ಎಂದೂ ಕೋರಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ವರ್ಷದಿಂದ ರಷ್ಯಾ ಹಾಗೂ ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ದವೂ ನಿಲ್ಲಬೇಕು ಎನ್ನುವ ಕೋರಿಕೆಯನ್ನು ಸಲ್ಲಿಸಿದ್ದಾರೆ. ಮೈಸೂರಿನ ಪರಂಪರೆಯಂತಿರುವ ಕುಸ್ತಿಗೆ ಇನ್ನಷ್ಟು ಶಕ್ತಿ ಕೊಟ್ಟು ಗರಡಿ ಮನೆಗಳಿಗೆ ಹೊಸ ರೂಪ ನೀಡಲಿ ಎನ್ನುವ ಮನವಿಯನ್ನೂ ಹಂಪನಾ ಮಾಡಿದ್ಧಾರೆ.

ಇದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಾಹಿತಿ ಹಂಪ ನಾಗರಾಜಯ್ಯ ಸೇರಿ ಹಲವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದಾರೆ. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಸಮಾರಂಭಕ್ಕೆ ಜಿಲ್ಲಾಡಳಿತದಿಂದ ವಾಟರ್ ಪ್ರೂಫ್ ಪೆಂಡಾಲ್ ನಿರ್ಮಾಣ ಮಾಡಲಾಗಿದೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments