
ಕಲಬುರಗಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡುವಾಗ ಜೆಸ್ಕಾಂ ಬಿಲ್ ಕಲೆಕ್ಟರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯ್ ಕುಮಾರ್ ನಾಗನಹಳ್ಳಿ (45) ಮೃತ ದುರ್ದೈವಿ. ಕಲಬುರಗಿಯ ಬಿದ್ದಾಪುರ ಕಾಲೋನಿ ನಿವಾಸಿ. ಕಲಬುರಗಿಯಿಂದ ಭಾಲ್ಕಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಇವರಿಗೆ ಕಮಲಾಪುರ ಸಮೀಪದಲ್ಲಿ ಹೃದಯಾಘಾತ ಸಂಭವಿಸಿದೆ. ಕಮಲಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.