ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಮಸ್ಯೆಯನ್ನು ಸ್ಥಳದಲ್ಲಿಯೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಇತ್ಯರ್ಥ ಪಡಿಸಿದ ಘಟನೆ ಭಾಗಮಂಡಲದಲ್ಲಿ ನಡೆದಿದೆ.

ಸರ್ವೆ ನಂ 74 ರಲ್ಲಿ ಭಾಗಮಂಡಲ ಗ್ರಾಮ ಪಂಚಾಯತಿ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು ಪಕ್ಕದ ಸರ್ವೆ ನಂ ಜಾಗ ದೇವರಕಾಡು ಅರಣ್ಯಕ್ಕೆ ಸೇರಿದ್ದಾಗಿರುತ್ತದೆ.ಸದರಿ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್,ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು.

ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ರಸ್ತೆ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರಸ್ತೆ ಮಾಡಿದ್ದಾರೆ ಎಂದು ಕೇಸ್ ದಾಖಲಿಸಿದ್ದರು. ಇಂದು ಭಾಗಮಂಡಲದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು ಮಾನ್ಯ ಎ.ಎಸ್.ಪೊನ್ನಣ್ಣ ನವರು ಆಗಮಿಸಿದಾಗ ಭಾಗಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು ಹಾಗೂ ಗ್ರಾಮದ ನಿವಾಸಿಗಳು ಸಮಸ್ಯೆಯನ್ನು ಬಗೆ ಹರಿಸಲು ಶಾಸಕರಲ್ಲಿ ಕೋರಿಕೊಂಡರು.

ತಕ್ಷಣವೇ ಪೊನ್ನಣ್ಣ ನವರು ಸ್ಥಳಕ್ಕೆ ಅರಣ್ಯ ಅಧಿಕಾರಿಗಳನ್ನು ಕರೆಸಿಕೊಂಡು ಪರಿಶೀಲನೆ ನಡೆಸಿ ಅರಣ್ಯ ಇಲಾಖೆ ಗಡಿಯನ್ನು ಇನ್ನೂ ಕೂಡ ಗುರುತಿಸದೇ ಇರುವುದರಿಂದ ಹಾಗೂ ಕುಡಿಯುವ ನೀರು ಮೂಲಭೂತ ಹಕ್ಕು ಆಗಿರುವುದರಿಂದ ತಕ್ಷಣವೇ ಮೋಟಾರ್ ಪಂಪ್ ಗಳನ್ನು ಹಿಂತಿರುಗಿಸಿ ನೀರಿನ ವ್ಯವಸ್ಥೆಗೆ ಅಡ್ಡಿ ಪಡಿಸದಂತೆ ಸಂಭಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಕಾನೂನು ರೀತಿ ಅಡಚಣೆ ಬಂದರೆ ತಾವು ಇತ್ಯರ್ಥ ಪಡಿಸುವವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ಗ್ರಾಮಸ್ಥರಿಗೆ ನೆರವಾಗಿದ್ದಾರೆ.

ಜನರ ಸಮಸ್ಯೆಗೆ ಸ್ಪಂದಿಸಿ ದುರ್ಗಮ ಹಾದಿಯನ್ನು ಕ್ರಮಿಸಿ ಪರಿಶೀಲಿಸಿ ತಕ್ಷಣವೇ ಸ್ಥಳದಲ್ಲಿಯೇ ಪರಿಹಾರ ಒದಗಿಸಿದ ಎ.ಎಸ್.ಪೊನ್ನಣ್ಣ ನವರ ಕಾರ್ಯಕ್ಷಮತೆಗೆ ಭಾಗಮಂಡಲ ಸುತ್ತಮುತ್ತಲಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

By admin

Leave a Reply

Your email address will not be published. Required fields are marked *

Verified by MonsterInsights