ಅರವಿಂದ್ ಕೇಜ್ರಿವಾಲ್ ಬಂಧನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಗ್ರ ನಾಯಕ ರಾಹುಲ್ ಗಾಂಧಿ, ತಮಿಳುನಾಡು ಸಿಎಂ ಸ್ಟಾಲಿನ್, ಕೇರಳ ಸಿಎಂ ಪಿಣರಾಯ್ ವಿಜಯನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ಹಲವರು ತೀವ್ರವಾಗಿ ಖಂಡಿಸಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.
ಭಯಭೀತ ಸರ್ವಾಧಿಕಾರಿ ಇಡೀ ಪ್ರಜಾತಂತ್ರವನ್ನೇ ನಾಶ ಮಾಡಲು ಹೊರಟಿದ್ದಾರೆ. ಮಾಧ್ಯಮಗಳು ಸೇರಿ ಎಲ್ಲಾ ಸಂಸ್ಥೆಗಳನ್ನು ಮೋದಿ ಕಬ್ಜಾ ಮಾಡಿದ್ದಾರೆ. ರಾಜಕೀಯ ಪಕ್ಷಗಳನ್ನು ವಿಭಜಿಸುತ್ತಿದ್ದಾರೆ.
ಅಸುರ ಶಕ್ತಿಗಾಗಿ ಪ್ರಮುಖ ವಿರೋಧ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತ ಮಾಡಿಸಿದ್ದಾರೆ. ಇದು ಸಾಲದು ಎಂಬಂತೆ ಇದೀಗ ಚುನಾಯಿತ ಮುಖ್ಯಮಂತ್ರಿಯನ್ನೇ ಬಂಧಿಸುವ ಮಟ್ಟಕ್ಕೆ ಹೋಗಿದ್ದಾರೆ. ಇದಕ್ಕೆ ಇಂಡಿಯಾ ತಕ್ಕ ಪ್ರತ್ಯುತ್ತರ ನೀಡಲಿದೆ
ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಟ್ವೀಟ್ ಮಾಡಿ ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭಯದಿಂದ ಅಕ್ರಮವಾಗಿ ವಿರೋಧ ಪಕ್ಷಗಳನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಅರೋಗೆಂಟ್ ಬಿಜೆಪಿ ನಿತ್ಯವೂ ನಮ್ಮದೇ ಗೆಲುವು ಎಂದು ಸುಳ್ಳು ಸುಳ್ಳೇ ಹೇಳುತ್ತಿದೆ. ಚುನಾವಣೆಗೆ ಮೊದಲೇ ಅಕ್ರಮವಾಗಿ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸ್ತಿದೆ.
ಒಂದು ವೇಳೆ ಅವರಿಗೆ ನಿಜವಾಗಿಯೂ ಗೆಲುವಿನ ವಿಶ್ವಾಸ ಇದ್ದಿದ್ದರೇ, ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡುತ್ತಿರಲಿಲ್ಲ. ಚುನಾವಣೆಗೆ ಮೊದಲು ವಿರೋಧ ಪಕ್ಷಗಳ ನಾಯಕರನ್ನು ಟಾರ್ಗೆಟ್ ಮಾಡುತ್ತಿರಲಿಲ್ಲ.
ಸತ್ಯ ಏನೆಂದರೇ ಚುನಾವಣೆ ಸೋಲಿನ ಭೀತಿಯಿಂದ ಬಿಜೆಪಿ ಹೆದರಿಬಿಟ್ಟಿದೆ. ಇದೇ ಭಯ ಆತಂಕದಲ್ಲಿ ವಿರೋಧ ಪಕ್ಷಗಳಿಗೆ ನಾನಾ ತೊಂದರೆ ಉಂಟು ಮಾಡಲು ಪ್ರಯತ್ನಿಸುತ್ತಿದೆ
ಇದು ಬದಲಾವಣೆಯ ಸಮಯ. ದಿಸ್ ಟೈಮ್ ಔಟ್ ಆಫ್ ಪವರ್
ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಾಖ್ಯಾನಿಸಿದ್ದಾರೆ. ಈ ಮೂಲಕ ಭಾರೀ ಹೋರಾಟದ ಮುನ್ಸೂಚನೆ ನೀಡಿದ್ದಾರೆ.
ಇದನ್ನು ಓದಿ