Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop Newsಪತ್ನಿ ಮೇಲಿನ ಅನುಮಾನಕ್ಕೆ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!

ಪತ್ನಿ ಮೇಲಿನ ಅನುಮಾನಕ್ಕೆ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!

ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತ ಮಕ್ಕಳನ್ನೇ ತಂದೆ ಕಡಿಯಿಂದ ಕೊಚ್ಚಿ ಕೊಲೆ ಮಾಡಿರುವ ದುರಂತದ ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ..

ಮಲಗಿದ್ದ ಮುಗ್ದ ಮಕ್ಕಳ ಮೇಲೆ ತಂದೆ ಶರಣಪ್ಪ ಕ್ರೌರ್ಯ ಮೆರದಿದ್ದಾನೆ. 5 ವರ್ಷದ ಮಗಳು ಸಾನ್ವಿ ಮತ್ತು 3 ವರ್ಷದ ಮಗ ಭರತ್ ಮೃತಪಟ್ಟಿದ್ದು, ಮತ್ತೊಬ್ಬ ಮಗ ವಯಸ್ಸು ಸುಮಾರು 2-3 ವರ್ಷ ಇದ್ದು, ಗಂಭೀರವಾಗಿ ಗಾಯಗೊಂಡು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಮಗು ಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಯಾದ ಶರಣಪ್ಪ ತನ್ನ ಪತ್ನಿ ಜಯಮ್ಮನ ಮೇಲೆ ಅನುಮಾನ ಹೊಂದಿರುತ್ತಿದ್ದ. ಕಳೆದ ಕೆಲವು ದಿನಗಳಿಂದ ಗಂಡ-ಹೆಂಡತಿಯ ನಡುವೆ ಗಂಭೀರ ಸಂಘರ್ಷಗಳು ನಡೆಯುತ್ತಿದ್ದವು. ಈ ಹಿನ್ನೆಲೆ ಜಯಮ್ಮ ತನ್ನ ತವರು ಮನೆಗೆ ಹೋಗಿದ್ದಳು. ಕಳೆದ ಹದಿನೈದು ದಿನಗಳ ಹಿಂದಷ್ಟೇ ಶರಣಪ್ಪ ತನ್ನ ಪತ್ನಿಯನ್ನು ಮನೆಗೆ ಕರೆತಂದಿದ್ದ. ಆದರೆ ಮತ್ತೆ ಇಬ್ಬರ ನಡುವೆ ಜಗಳ ಉಂಟಾಗುತ್ತು. ನಿನ್ನೆ ಶರಣಪ್ಪ ತನ್ನ ಮಗಳು ಸಾನ್ವಿಯನ್ನು ತವರು ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ನಿನ್ನೆ ಪತ್ನಿ ಇಲ್ಲದಿರುವುದನ್ನ ಕಂಡು ಶರಣಪ್ಪ, ಕೋಪದಲ್ಲಿ ಕೊಡಲಿಯನ್ನು ತೆಗೆದುಕೊಂಡು ಮಲಗಿರುವ ಮಕ್ಕಳ ಮೇಲೆ ದಾಳಿ ಮಾಡಿದ. 5 ವರ್ಷದ ಮಗಳು ಸಾನ್ವಿ ಮತ್ತು 3 ವರ್ಷದ ಮಗ ಭರತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಾದಗಿರಿ ಡಿವೈಎಸ್ಪಿ ಸುರೇಶ್ ನಾಯಕ್ ಮತ್ತು ಪಿಎಸ್‌ಐ ಹಣಮಂತ ಬಂಕಲಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದರು. ಆರೋಪಿ ಶರಣಪ್ಪ ಮಕ್ಕಳನ್ನ ಕೊಲೆ ಮಾಡಿ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments