ರಾಜಕೀಯ

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು- ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸೂಚಿಸಿದರು.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

Comments (0)

Your email address will not be published. Required fields are marked *

Back to top button